ವಾಯುವಜ್ರ ಬಸ್ಸುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿ ಕಾರ್ಯಾಚರಣೆ ಮಾಡುತ್ತಿರುವ ಬಗ್ಗೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಿನಾಂಕ:19.02.2017 ರಿಂದ 30.04.2017 ರವರೆಗೆ ರನ್ವೇ ನವೀಕರಣ ಮತ್ತು ಕಾಮಗಾರಿ ಕಾರ್ಯ ಹಿನ್ನೆಲೆಯಲ್ಲಿ ಬೆಳಗ್ಗೆ 10:00 ರಿಂದ ಸಂಜೆ 17:00 ರವರೆಗೆ ವಿಮಾನಗಳ ಆಗಮನ ಮತ್ತು ನಿರ್ಗಮನಗಳನ್ನು ನಿಲ್ಲಿಸಿರುವುದರಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಕಾರ್ಯಾಚರಣೆ ಮಾಡುವ ವಾಯುವಜ್ರ ಅನುಸೂಚಿಗಳ ವೇಳೆಯನ್ನು ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲಕ್ಕಾಗಿ & ಉತ್ತಮ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಬದಲಾಯಿಸಲಾಗಿದೆ. ಒಟ್ಟು 91 ಅನುಸೂಚಿಗಳ ವೇಳೆಯನ್ನು ತಾತ್ಕ್ಲಿಕವಾಗಿ ದಿನಾಂಕ:19.02.2017 ರಿಂದ ಜಾರಿಗೆ ಬರುವಂತೆ ಬದಲಾಯಿಸಿ ಕಾರ್ಯಾಚರಣೆ ಮಾಡಲಾಗುವುದು. ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯಾಚರಣೆಯಾಗುವ ಮಾರ್ಗಗಳ ಮಾಹಿತಿಯನ್ನು ಸಂಸ್ಥೆಯ ಅಂತರ್ಜಾಲ www.mybmtc.com ನಲ್ಲಿ ಪಡೆಯಬಹುದಾಗಿರುತ್ತದೆ.