ಫೆಬ್ರವರಿ-2017 ರಲ್ಲಿ ಟಿಕೇಟ್ ರಹಿತ ಪ್ರಯಾಣಿಕರಿಂದ ದಂಡ ವಸೂಲಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ತನಿಖಾ ತಂಡಗಳು ಫೆಬ್ರವರಿ-2017 ರಲ್ಲಿ ಒಟ್ಟು 20630 ಟ್ರಿಪ್ಗಳನ್ನು ತಪಾಸಿಸಿ 7054 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆಹಚ್ಚಿ ಅವರಿಂದ ಒಟ್ಟು ರೂ. 11,11,180/- ದಂಡ ವಸೂಲಿ ಮಾಡಿ ಸಂಸ್ಧೆಯ ನಿರ್ವಾಹಕರುಗಳ ಮೇಲೆ 2175 ಪ್ರಕರಣಗಳನ್ನು ದಾಖಲಿಸಿರುತ್ತಾರೆ. ಮಹಿಳಾ ಪ್ರಯಾಣಿಕರಿಗೆಂದೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 279 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 27.900/- ಗಳನ್ನು ಮೋಟಾರು ವಾಹನ ಕಾಯ್ದೆ 1988 ಕಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿರುತ್ತದೆ.